Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತಿ, ಮಗನನ್ನ ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಗೃಹಿಣಿ!

Spread the love

ಹಾಸನ: ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದೆ. ಒಂದು ಬಾರಿ ಓಡಿಹೋಗಲು ಯತ್ನಿಸಿದ್ದಾಗ ಪೋಷಕರ ದೂರಿನ ಮೇರೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು ಎಂಬುದು ತಿಳಿದುಬಂದಿದೆ. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ ಜತೆ ಓಡಿಹೋಗಿ ಕಾರಿನಲ್ಲೇ ಮದುವೆಯಾಗಿದ್ದಾರೆ!
ಘಟನೆಯ ವಿವರ
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾಗೆ 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರೊಂದಿಗೆ ವಿವಾಹವಾಗಿತ್ತು. ಪ್ರಕಾಶ್ ಅವರು ಹರ್ಷಿತಾ ಅವರ ಅತ್ತೆಯ ಮಗನಾಗಿದ್ದು, ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೋದ ಹರ್ಷಿತಾ ವಾಪಸ್ ಬಂದಿರಲಿಲ್ಲ.
ಪೊಲೀಸ್ ಠಾಣೆಯಲ್ಲಿಯೇ ಹಠ!
ಮಗಳು ಕಾಣೆಯಾಗಿರುವ ಬಗ್ಗೆ ಹರ್ಷಿತಾ ಪೋಷಕರು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹರ್ಷಿತಾಳನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು. ಈ ವೇಳೆ ಪತಿ ಪ್ರಕಾಶ್ ಜೊತೆ ಹೋಗಲು ನಿರಾಕರಿಸಿದ ಹರ್ಷಿತಾ, ತನ್ನ ಪ್ರಿಯಕರ ಸಚಿನ್ ಜೊತೆಗೇ ಹೋಗುವುದಾಗಿ ಹಠ ಹಿಡಿದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.
ಆಸ್ಪತ್ರೆಗೆ ಹೋಗುವ ನೆಪದಲ್ಲಿ ಮತ್ತೆ ಪರಾರಿ
ಸಾಂತ್ವನ ಕೇಂದ್ರದಲ್ಲಿದ್ದ ಹರ್ಷಿತಾ, ತನಗೆ ಆರೋಗ್ಯ ಸರಿಯಿಲ್ಲ ಎಂದು ನಾಟಕವಾಡಿ ಆಸ್ಪತ್ರೆಗೆ ಹೋಗುವ ನೆಪದಲ್ಲಿ ಹೊರಬಂದಿದ್ದಾರೆ. ಬಳಿಕ ಅಲ್ಲಿಂದಲೇ ತನ್ನ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ತೆರಳಿ ವಿವಾಹವಾಗಿದ್ದಾರೆ. ಮಗ ಹಾಗೂ ಪತಿಯನ್ನು ತೊರೆದು ಪ್ರಿಯಕರನ ಜೊತೆ ಹೋದ ಹರ್ಷಿತಾಳ ಕೃತ್ಯಕ್ಕೆ ಪೋಷಕರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *