ಸತ್ತೇಗಾಲ ಬಳಿ ವ್ಯಕ್ತಿಯ ಅಸ್ಥಿಪಂಜರ ಪತ್ತೆ: ವಾರಸುದಾರರ ಹುಡುಕಾಟ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಜಾಗೇರಿಯ ಬೂದಗಟ್ಟೆ ದೊಡ್ಡ ಸಮೀಪದ ಕಾವೇರಿ ನದಿ ದಡದ ಬಳಿ ಸುಮಾರು 50-60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದೆ.
ಕಾವೇದಿ ನದಿ ದಡದ ಬಳಿ ವ್ಯಕ್ತಿಯೊಬ್ಬರ ಗುರುತು ಹಿಡಿಯಲಾಗದ ಸ್ಥಿತಿಯಲ್ಲಿ ಅಸ್ಥಿಪಂಜರ ದೊರೆತ್ತಿರುವ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿ ಲಿಂಗರಾಜುರವರು ಪೊಲೀಸರಿಗೆ ನೀಡಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸುಪ್ರೀತ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ಮಾಡಿ, ನಂತರ ಅಂಬ್ಯುಲೆನ್ಸ್ ನಲ್ಲಿ ಮೃತದೇಹವನ್ನು ಚಾಮರಾಜನಗರದ ಸಿಮ್ಸ್ ಗೆ ರವಾನಿಸಲಾಯಿತು.
ಮೃತ ದೇಹ ಪತ್ತೆಯಾದ ಸ್ಥಳಕ್ಕೆ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ, ಸುಮಾರು ಎರಡರಿಂದ ಮೂರು ತಿಂಗಳ ಕಾಲ ಹಿಂದೆ ಸಾವನ್ನಪ್ಪಿರುಬಹುದು ಶಂಕಿಸಿದ್ದಾರೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಾರಸುದಾರರ ಪತ್ತೆಗೆ ಕ್ರಮ ಜರುಗಿಸಿದ್ದಾರೆ.
