Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆ.ಆರ್. ಪುರಂನಲ್ಲಿ ಅಮಾನವೀಯ ಘಟನೆ: ಮಚ್ಚಿನಿಂದ ನಾಯಿಯನ್ನು ಕೊಚ್ಚಿದ ಕಿಡಿಗೇಡಿ; ಸಾರ್ವಜನಿಕರ ಆಕ್ರೋಶ

Spread the love

ಬೆಂಗಳೂರು: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *