Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಪ್ರತಿಷ್ಠಿತ ಕಂಪನಿ ಉದ್ಯೋಗಿಯ ಸಾ*ವು ನಿಗೂಢ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೂಜಾ ದತ್ತಾ ಜಾರ್ಖಂಡ್ ಮೂಲದವಳು. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ವಾಸವಿದ್ದಳು. ಈ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು. ಸದ್ಯ ಎಲ್ಲೂ ಕೆಲಸ ಮಾಡ್ತಿರಲಿಲ್ಲ ಅನ್ನೋದು ಗೊತ್ತಾಗಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್ ಪತ್ತೆಯಾಗಿದೆ. ರೂಂನಲ್ಲಿ ಬೆತ್ತಲೆಯಾಗಿ ಪೂಜಾ ಮೃತದೇಹ ಬಿದ್ದಿದೆ. ರೂಂ ತುಂಬಾ ಕೆಲ ಪೇಪರ್‌ಗಳು ಹರಿದಾಕಿರೋದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ದುರ್ವಾಸನೆಯಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿತ್ತು. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.

ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಸಾವಿನ ಕುರಿತು ಭಾರಿ ಅನುಮಾನಗಳನ್ನು ಮೂಡಿಸಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪೂಜಾ ಜೊತೆ ಜಗಳವಾಡುತ್ತಿದ್ದ ಆ ಯುವಕ ಯಾರು?

“ಪೂಜಾ ದತ್ತಾ ಕಳೆದ ಮೂರು ವರ್ಷಗಳಿಂದ ನನ್ನ ಮನೆಯಲ್ಲಿ ಬಾಡಿಗೆಗೆ ಇದ್ದಳು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅವಿವಾಹಿತೆಯಾಗಿದ್ದಳು. ಹೆಚ್ಚಾಗಿ ಹಿಂದಿ ಭಾಷೆಯಲ್ಲೇ ಮಾತನಾಡುತ್ತಿದ್ದಳು.” ಎಂದು ಮಾಲಕಿ ಜಾನಕಮ್ಮ ಹೇಳಿದ್ದಾರೆ. “ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು. ಆದರೆ ಆ ಜಗಳಕ್ಕೆ ಕಾರಣವೇನು ಎಂಬುದು ಮಾತ್ರ ತಿಳಿಯುತ್ತಿರಲಿಲ್ಲ.”

“ಕೊನೆಯ ಬಾರಿಗೆ ನಾನು ಪೂಜಾಳನ್ನು ಕಳೆದ ಗುರುವಾರ ನೋಡಿದ್ದೆ. ಆಕೆ ದಿನಸಿ ಸಾಮಗ್ರಿಗಳನ್ನು ತರಲು ಮೂರನೇ ಮಹಡಿಯಿಂದ ಕೆಳಗಿಳಿದು ಬರುತ್ತಿದ್ದಳು. ಆನಂತರ ಆಕೆ ಕಾಣಿಸಿಕೊಂಡಿರಲಿಲ್ಲ.” “ಇಂದು ಪಕ್ಕದ ಮನೆಯ ಯುವಕರು ಮನೆಯಿಂದ ಭಾರಿ ದುರ್ನಾತ ಬರುತ್ತಿದೆ ಎಂದು ತಿಳಿಸಿದರು. ತಕ್ಷಣ ಬಾಗಿಲು ಒಡೆದು ನೋಡಿದಾಗ ಪೂಜಾ ಬೆತ್ತಲಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಮೃತದೇಹ ಸಂಪೂರ್ಣವಾಗಿ ಕೊಳೆತು ಹೋಗಿತ್ತು.” ಎಂದು ಹೇಳಿದ್ದಾರೆ.

ಮನೆ ಮಾಲಕಿ ಹೇಳಿಕೆಯಂತೆ, ಪೂಜಾ ಜೊತೆ ಜಗಳವಾಡುತ್ತಿದ್ದ ಆ ಯುವಕ ಯಾರು? ಗುರುವಾರದ ನಂತರ ನಡೆದಿದ್ದೇನು? ಎಂಬ ಪ್ರಶ್ನೆಗಳು ಈಗ ಕಾಡುತ್ತಿವೆ. ಬೆತ್ತಲೆ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿರುವುದು ಇದು ವ್ಯವಸ್ಥಿತ ಕೊಲೆ ಎಂಬ ಅನುಮಾನವನ್ನು ಬಲಪಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *