Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂರು ಜೀವಗಳು; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹ*ತ್ಯೆ

Spread the love

ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ತಡರಾತ್ರಿ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಶಿವಣ್ಣ (40) ಹಾಗೂ ಇವರ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (6) ಮೃತಪಟ್ಟವರು. ಪತ್ನಿಯು ಗಂಡನಿಂದ ದೂರವಾಗಿದ್ದರಿಂದ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಇದರಿಂದ ಮನನೊಂದ ಶಿವಣ್ಣ, ಮಕ್ಕಳಿಗೆ ವಿಷವಿಕ್ಕಿ ಅಥವಾ ಉಸಿರುಗಟ್ಟಿಸಿ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶನಿವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮಕ್ಕಳ ಮೃತದೇಹಗಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕುಣಿಗಲ್ ಸಿಪಿಐ ಮಾಧ್ಯಾ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಾಲಯದ ಅರ್ಚಕನಾಗಿದ್ದ ಶಿವಣ್ಣ ತನ್ನ ಅಕ್ಕನ ಮಗ ಹೇಮಂತ್ ಎಂಬಾತನನ್ನು ತನ್ನ ಮನೆಯಲ್ಲೇ ಇರಿಸಿಕೊಂಡು ಸಾಕಿ ಸಲಹಿದ್ದರು. ಆದರೆ ವಾರದ ಹಿಂದೆ ಹೇಮಂತ್ ಜೊತೆ ಶಿವಣ್ಣನ ಪತ್ನಿ ಕಾವ್ಯಾ ಓಡಿ ಹೋಗಿದ್ದಳು. ಬಳಿಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಗ್ರಾಮಸ್ಥರ ಮಧ್ಯಸ್ಥಿಕೆಯಲ್ಲಿ ವಾಪಸ್ ಆಲ್ಕೆರೆ ಗ್ರಾಮಕ್ಕೆ ಬಂದಿದ್ದ ಕಾವ್ಯಾ ಪತಿ ಮನೆಯಲ್ಲಿ ಇಲ್ಲದ ವೇಳೆ ಮನೆಯಲ್ಲಿದ್ದ ನಗ-ನಗದು ದೋಚಿ ಮತ್ತೆ ಪರಾರಿಯಾಗಿದ್ದಳು. ಇದರಿಂದ ಮನನೊಂದಿದ್ದ ಶಿವಣ್ಣ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *