Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14.75 ಕೋಟಿ ಮೌಲ್ಯದ ಡ್ರಗ್ಸ್ ವಶ; ಕೇರಳ ಮೂಲದ ಇಬ್ಬರ ಬಂಧನ

Spread the love

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ.

ನಂದಿನಿ ಲೇಔಟ್: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ

ನಂದಿನಿ ಲೇಔಟ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಸೌಗೇಶ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5.75 ಕೋಟಿ ರೂ.ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ವಿದೇಶದಿಂದ ಈ ಹೈಡ್ರೋ ಗಾಂಜಾವನ್ನು ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈ ಹಿಂದೆಯೇ ಅಲ್ಲಿನ ಎನ್​ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ನಂದಿನಿ ಲೇಔಟ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಯಶವಂತಪುರ: 9 ಕೋಟಿ ಮೌಲ್ಯದ ಎಂಡಿಎಂಎ ಸೀಜ್, ನಾಲ್ವರು ಲಾಕ್

ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಯಶವಂತಪುರ ಪೊಲೀಸರು ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಬೇಧಿಸಿದ್ದಾರೆ. ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್​ರನ್ನು ಬಂಧಿಸಲಾಗಿದ್ದು, ಈ ನಾಲ್ವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಸೀಜ್ ಮಾಡಲಾಗಿದೆ.

ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ನಗರದಲ್ಲಿ ಸ್ಥಳೀಯರಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಬಂಧಿತರಿಂದ ಒಂದು ಕಾರು ಹಾಗೂ ಐದು ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಲ್ಲಿ ಸೈಯದ್ ಸುಹೇಲ್ ಹೊಸಕೋಟೆ ಠಾಣೆಯ ರೌಡಿಶೀಟರ್ ಆಗಿದ್ದು, ಈ ಹಿಂದೆ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಸದ್ಯ ಈ ಜಾಲಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *