Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿರತೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ವನ್ಯಜೀವಿ ಸಾವು, ಸವಾರನಿಗೆ ಗಂಭೀರ ಗಾಯ.

Spread the love

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ ಸಮೇತ ಕೆಳಗೆ ಬಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಗಾಜನೂರು ಆರ್ ಎಫ್ ಓ ವಿನಯ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *