Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೇ 12: ಪಾಣೆಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

Spread the love

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ ಸಹಯೋಗದೊಂದಿಗೆ ಸಮ್ಮೇಳನವು ಮೇ 12 ರಂದು ಮೇ 12 ರಂದು ಮಂಗಳವಾರ ಪಾಣೆಮಂಗಳೂರು ಆಲಡ್ಕದ ಎಸ್‌.ಎಸ್‌. ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಾಗಿದೆ.
ಈ ಪ್ರಯುಕ್ತ ಸಮ್ಮೇಳನ ಸ್ವಾಗತ ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಮಂಗಳವಾರ ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಾಗಿದೆ.
ಈ ಪ್ರಯುಕ್ತ ಸಮ್ಮೇಳನ ಸ್ವಾಗತ ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ಹಂಝ ಬಸ್ತಿಕೋಡಿ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.
ಸಭೆಯಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸಂಚಾಲಕ ಪಿ.ಎ. ರಹೀಂ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ನೆರಳಕಟ್ಟೆ, ಅಕಾಡೆಮಿ ಸದಸ್ಯ ಅಬೂಬಕ್ಕರ್ ಅನಿಲಕಟ್ಟೆ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಸಮ್ಮೇಳನದ ಯಶಸ್ಸಿಗಾಗಿ ತಾಲೂಕಿನ ನೂರಕ್ಕೂ ಅಧಿಕ ಮಂದಿಯನ್ನೊಳಗೊಂಡ ಸಮಿತಿ ಹಾಗೂ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.
ಸಮ್ಮೇಳನ ಅಂಗವಾಗಿ ಮಹಳೆಯರಿಗೆ ಮೆಹಂದಿ ಹಾಗೂ ಬ್ಯಾರಿ ಸಾಂಪ್ರದಾಯಿಕ ತಿಂಡಿ-ತಿನಿಸುಗಳ ಸ್ಪರ್ಧೆ ಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ನಿರ್ವಹಣೆಗೆ ಮಹಿಳಾ ಸಮಿತಿ ರಚಿಸಲಾಗಿದೆ ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *