Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತಮಿಳು ಮಣ್ಣಿನಲ್ಲಿ ‘ದಳಪತಿ’ ಯುಗಾರಂಭ: ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

Spread the love

ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ (Chief Minister) ಪ್ರಮಾಣವಚನ (Oatch) ಸ್ವೀಕರಿಸಿದರು.

ಸದ್ಯ ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಸಿಕೆ (VCK), ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.

ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗಿತ್ತು. ಆದರೆ ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಯಾರಿಗೂ ಡಿಸಿಎಂ ಸ್ಥಾನ ನೀಡಿಲ್ಲ.

ಪ್ರಮಾಣವಚನ ಸ್ವೀಕರಿಸಿದವರು ಯಾರು?
ಎನ್. ಆನಂದ್ – ಪಕ್ಷದ ಪ್ರಧಾನ ಕಾರ್ಯದರ್ಶಿ
ಆಧವ್ ಅರ್ಜುನ- ಚುನಾವಣಾ ಪ್ರಚಾರ ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ
ಕೆ.ಎ. ಸೆಂಗೊಟ್ಟೈಯನ್ – ಮಾಜಿ ಸಚಿವ ಮತ್ತು ಪಕ್ಷದ ಕಾರ್ಯಕಾರಿ ಸಮಿತಿಯ ಮುಖ್ಯ ಸಂಯೋಜಕ
ಡಾ. ಕೆ.ಜಿ. ಅರುಣ್‌ರಾಜ್- ನೀತಿ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ
ಪಿ. ವೆಂಕಟರಮಣನ್ – ಪಕ್ಷದ ಖಜಾಂಚಿ
ಸಿ.ಟಿ.ಆರ್. ನಿರ್ಮಲ್ ಕುಮಾರ್ – ಜಂಟಿ ಪ್ರಧಾನ ಕಾರ್ಯದರ್ಶಿ
ಎ. ರಾಜ್‌ಮೋಹನ್ – ಪ್ರಚಾರ ಕಾರ್ಯದರ್ಶಿ
ಡಾ. ಟಿ.ಕೆ. ಪ್ರಭು – ಮಂತ್ರಿ
ಸೆಲ್ವಿ ಎಸ್. ಕೀರ್ತನಾ – ಸಂಪುಟದ ಅತ್ಯಂತ ಕಿರಿಯ ಸಚಿವೆ
ಒಟ್ಟು ಸಂಖ್ಯಾಬಲ ಎಷ್ಟಿದೆ?
ಟಿವಿಕೆ (107), ಕಾಂಗ್ರೆಸ್ (5), ಸಿಪಿಐ (2), ಸಿಪಿಎಂ (2), ವಿಸಿಕೆ (2), ಮುಸ್ಲಿಂ ಲೀಗ್ (2).
ಸರ್ಕಾರ ರಚನೆಯ ಬೆನ್ನಲ್ಲೇ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಮೇ 13ರವರೆಗೆ (3 ದಿನಗಳು) ಗಡುವು ನೀಡಿದ್ದಾರೆ. 120 ಶಾಸಕರ ಬೆಂಬಲದೊಂದಿಗೆ ವಿಜಯ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *