Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟರ್ಕಿಶ್ ಏರ್‌ಲೈನ್ಸ್‌ ವಿಮಾನಕ್ಕೆ ಬೆಂಕಿ: 289 ಮಂದಿ ಕೂದಲೆಳೆ ಅಂತರದಲ್ಲಿ ಪಾರು

Spread the love

ಕಠ್ಮಂಡು:  ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಟರ್ಕಿಶ್ ಏರ್‌ಲೈನ್ಸ್ ವಿಮಾನವೊಂದು ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 278 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

ಇಸ್ತಾನ್‌ಬುಲ್‌ನಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸಿದ ಟರ್ಕಿಶ್ ಏರ್‌ಲೈನ್ಸ್‌ನ ಏರ್‌ಬಸ್ A330 ವಿಮಾನವು ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ ಬಲಭಾಗದ ಹಿಂಬದಿ ಚಕ್ರಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ‘ಟ್ಯಾಕ್ಸಿವೇ ಬ್ರಾವೋ’ ಬಳಿ ನಿಂತ ತಕ್ಷಣ ಅಲರ್ಟ್ ಆದ ವಿಮಾನ ನಿಲ್ದಾಣದ ಅಗ್ನಿಶಾಮಕ ದಳವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ತುರ್ತು ಸ್ಲೈಡ್‌ಗಳ ಮೂಲಕ ಇಳಿಯುವ ಸಂದರ್ಭದಲ್ಲಿ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಿಂದಾಗಿ ರನ್‌ವೇ ಸಂಚಾರಕ್ಕೆ ಅಡ್ಡಿಯಾದ ಕಾರಣ ಸುಮಾರು ಎರಡು ಗಂಟೆಗಳ ಕಾಲ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಿಗ್ಗೆ 8:12ರ ಸುಮಾರಿಗೆ ವಿಮಾನವನ್ನು ರನ್‌ವೇಯಿಂದ ತೆರವುಗೊಳಿಸಿದ ನಂತರ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಪುನಃ ಅವಕಾಶ ಕಲ್ಪಿಸಲಾಯಿತು.

ನಾಗರಿಕ ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು  ತಾಂತ್ರಿಕ ದೋಷ ಅಥವಾ ‘ಹಾರ್ಡ್ ಲ್ಯಾಂಡಿಂಗ್’ನಿಂದಾಗಿ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ವಿಮಾನವನ್ನು ತಾಂತ್ರಿಕ ತಪಾಸಣೆಗಾಗಿ ಗ್ರೌಂಡ್ ಮಾಡಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.


Spread the love
Share:

administrator

Leave a Reply

Your email address will not be published. Required fields are marked *