Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಎಂ ಆಗಿ ವಿಜಯ್ ಫುಲ್ ಆ್ಯಕ್ಷನ್: ತಮಿಳುನಾಡಿನಾದ್ಯಂತ 717 ‘ಟಾಸ್ಮ್ಯಾಕ್’ ಮದ್ಯದ ಅಂಗಡಿ ಬಂದ್ ಮಾಡಲು ಆದೇಶ

Spread the love

ತಮಿಳುನಾಡು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಕಟ್ಟುನಿಟ್ಟಿನ ಆ್ಯಕ್ಷನ್ ಆರಂಭಿಸಿದ್ದಾರೆ. ತಮಿಳುನಾಡು ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಅವರು, ರಾಜ್ಯದಾದ್ಯಂತ ಇರುವ 717 ಸರ್ಕಾರಿ ಸ್ವಾಮ್ಯದ ‘ಟಾಸ್ಮ್ಯಾಕ್’ (TASMAC) ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ಆದೇಶದಂತೆ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ತಕ್ಷಣವೇ ತೆರವುಗೊಳಿಸಬೇಕಿದೆ. ಮುಂದಿನ ಎರಡು ವಾರಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಗಡುವು ನೀಡಲಾಗಿದೆ.

ತಮಿಳುನಾಡಿನಲ್ಲಿ ಶಾಲೆ ಮತ್ತು ದೇವಸ್ಥಾನಗಳ ಹತ್ತಿರವಿರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಬೇಕೆಂದು ಜನರು ದಶಕಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಡಿಎಂಕೆ ಮತ್ತು ಎಐಎಡಿಎಂಕೆ  ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮದ್ಯಪಾನ ನಿಷೇಧದ ಭರವಸೆ ನೀಡಿದ್ದರೂ, ಆದಾಯದ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ವಿಜಯ್ ಈಗ ಅಧಿಕಾರಕ್ಕೆ ಬರುತ್ತಲೇ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

ತಮಿಳುನಾಡಿನಲ್ಲಿ ಸದ್ಯ 5,000ಕ್ಕೂ ಹೆಚ್ಚು ಸರ್ಕಾರಿ ಮದ್ಯದ ಅಂಗಡಿಗಳಿವೆ. ಇವುಗಳಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 40,000 ಕೋಟಿ ರೂಪಾಯಿಗಳ ಬೃಹತ್ ಆದಾಯ ಹರಿದು ಬರುತ್ತಿದೆ. ಇಷ್ಟು ದೊಡ್ಡ ಮೊತ್ತದ ಆದಾಯವಿದ್ದರೂ ಸಹ ಸಾರ್ವಜನಿಕ ಹಿತದೃಷ್ಟಿಯಿಂದ ವಿಜಯ್ ಈ ನಿರ್ಧಾರ ತೆಗೆದುಕೊಂಡಿರುವುದು ವಿಶೇಷ.


Spread the love
Share:

administrator

Leave a Reply

Your email address will not be published. Required fields are marked *