35 ಲಕ್ಷ ಮೌಲ್ಯದ ಹೈಡ್ರೊವಿಡ್ ಗಾಂಜಾ ಜಪ್ತಿ; ಕಾಲೇಜು ವಿದ್ಯಾರ್ಥಿನಿ ಮುಲ್ಕಿ ಪೊಲೀಸರ ವಶಕ್ಕೆ

ಮಂಗಳೂರು: ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತೆಯನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ಬಂಧಿಸಿ 35,00,000 ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೋಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ ಸುಹಾನ (21) ಬಂಧಿತ ಆರೋಪಿತೆ. ಬಂಧಿತೆ ಕುಂದಾಪುರ ಕಾಲೇಜೊಂದರ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ.ಮಂಗಳವಾರ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಸುಹಾನಾ ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತೆಯನ್ನು ವಶಕ್ಕೆ ಪಡೆದು ಆಕೆಯ ಬಳಿ ಇದ್ದ ಸುಮಾರು 35,00,000 ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ಸ್ವಾಧೀನಕೊಳ್ಳಲಾಗಿದೆ.ಈ ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದುಬಂದಿದೆ. ಈ ಆರೋಪಿತೆಯ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.ಆರೋಪಿತೆಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ. ಕ್ರ 37/2026 ಕಲಂ: 8(C), 22(C) NDPS Act ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ ನಲ್ಲಿ O. R No: 177/2025-26 U/S 20(b), 2(B), 23(b), 27(A) & 29 NDPS Act ಪ್ರಕರಣ ದಾಖಲಾಗಿರುತ್ತದೆ.