Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚುನಾವಣಾ ಆಯೋಗದಿಂದ ಮಾಸ್ಟರ್ ಪ್ಲಾನ್: ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಘೋಷಣೆ

Spread the love

ಹೊಸದಿಲ್ಲಿ: ಕರ್ನಾಟಕ, ಮಹಾರಾಷ್ಟ್ರ, ದಿಲ್ಲಿ ಸೇರಿದಂತೆ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.
ಭಾರತೀಯ ಚುನಾವಣಾ ಆಯೋಗ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವಂತೆ ನಿರ್ದೇಶಿಸಿದೆ. ಮೂರನೇ ಹಂತದ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡರೆ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ ಇಡೀ ದೇಶದಲ್ಲಿ ಎಸ್ ಐಆರ್ ಪ್ರಕ್ರಿಯೆ ನಡೆಸಿದಂತಾಗುತ್ತದೆ.

13 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಎರಡು ಹಂತಗಳಲ್ಲಿ SIR ಪ್ರಕ್ರಿಯೆ ನಡೆದಿದೆ. ಈ ಪ್ರಕ್ರಿಯೆ ಸುಮಾರು 59 ಕೋಟಿ ಮತದಾರರನ್ನು ಒಳಗೊಂಡಿದ್ದು, 6.3 ಲಕ್ಷಕ್ಕೂ ಹೆಚ್ಚು BLO ಗಳು ಮತ್ತು ರಾಜಕೀಯ ಪಕ್ಷಗಳಿಂದ ನೇಮಕಗೊಂಡಿದ್ದ 9.2 ಲಕ್ಷ BLA ಗಳು SIR ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
ಮೂರನೇ ಹಂತದ ಎಸ್‌ಐಆರ್ ಪ್ರಕ್ರಿಯೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ಹರ್ಯಾಣ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದಿಲ್ಲಿಯ NCT, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರಾ, ತೆಲಂಗಾಣ, ಉತ್ತರಾಖಂಡದಲ್ಲಿ ನಡೆಯಲಿದೆ.


Spread the love
Share:

administrator

Leave a Reply

Your email address will not be published. Required fields are marked *