Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅರ್ಧ ಗಂಟೆಗೂ ಹೆಚ್ಚು ಕಾಲ ಸಾವು-ಬದುಕಿನ ಹೋರಾಟ: ಬಂಡೀಪುರ ಹೆದ್ದಾರಿಯಲ್ಲಿ ಕೋತಿಯ ವಿಡಿಯೋ ವೈರಲ್!

Spread the love

ಚಾಮರಾಜನಗರ: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಊಟಿ-ಗುಂಡ್ಲುಪೇಟೆ ಹೆದ್ದಾರಿಯಲ್ಲಿ, ಬಂಡೀಪುರ ಹಳೆಯ ಡಿಸಿಎಫ್ ಕಚೇರಿಯ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಚೀಲದಲ್ಲಿ ಮುಖ ಸಿಲುಕಿಕೊಂಡು ನಡೆದಾಡುತ್ತಿದ್ದ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವಾರ ನಡೆದ ಈ ಘಟನೆಯನ್ನು ನೋಡಿ ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದು ಕಾಡುಪ್ರಾಣಿಗಳಿಗೆ ಮಾರಕವಾಗುತ್ತಿದ್ದು, ಬಂಡೀಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *