Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೃಷಿ ಹೊಂಡದಲ್ಲಿ ಕರಗಿಹೋದ ಮೂರು ಜೀವಗಳು; ಈಜು ಕಲಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ಸಾವು!

Spread the love

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿಯ ಕೃಷಿ ಹೊಂಡದಲ್ಲಿ ನಡೆದ ದುರಂತದಲ್ಲಿ ತಂದೆ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಕ್ಕಳಿಗೆ ಈಜು ಕಲಿಸಲು ಹೋಗಿದ್ದಾಗ ಕಾಲು ಜಾರಿ ಬಿದ್ದು ದಾರುಣ ಘಟನೆ ಸಂಭವಿಸಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ನಿವಾಸಿ ಶ್ರೀನಿವಾಸ್ (40), ಇವರ ಮಕ್ಕಳಾದ ಚೇತನ್ (13) ಮತ್ತು ರಾಜೇಶ್ (8) ಮೃತಪಟ್ಟ ದುರ್ದೈವಿಗಳು.

ಭಾನುವಾರ ಶಾಲಾ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್ ಅವರು ತಮ್ಮಿಬ್ಬರು ಮಕ್ಕಳಿಗೆ ಈಜು ಕಲಿಸಿಕೊಡಲು ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ಕರೆದುಕೊಂಡು ಹೋಗಿದ್ದರು. ಈ ವೇಳೆ ಹೊಂಡದ ದಂಡೆಯ ಮೇಲೆ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಂಡದ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಹೊಂಡದಲ್ಲಿ ನೀರಿನ ಆಳ ಹೆಚ್ಚಾಗಿದ್ದರಿಂದ ಮೂವರೂ ಹೊರಬರಲಾರದೆ ಉಸಿರುಗಟ್ಟಿ ಅಲ್ಲೇ ಕೊನೆಯುಸಿರೆಳೆದಿದ್ದಾರೆ.

ಒಂದೇ ಕುಟುಂಬದ ಮೂವರು ಜಲಸಮಾಧಿಯಾಗಿರುವ ವಿಷಯ ತಿಳಿಯುತ್ತಿದ್ದಂತೆ ನಕ್ಕನಹಳ್ಳಿ ಗ್ರಾಮದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಮಾಸ್ತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *