Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಲೂರು: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ 2 ವರ್ಷದ ಮಗು ಉಸಿರುಗಟ್ಟಿ ಸಾ*ವು!

Spread the love

ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ.

ಮಾಲೂರು ನಿವಾಸಿಗಳಾದ ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಪುತ್ರ ವಿಜಯೇಂದ್ರ ಮೃತಪಟ್ಟ ದುರ್ದೈವಿ.

ಮಗು ವಿಜಯೇಂದ್ರ ಮನೆಯಲ್ಲಿ ಎಂದಿನಂತೆ ಆಟವಾಡುತ್ತಿದ್ದಾಗ ಅಲ್ಲಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ನೆಲ್ಲಿಕಾಯಿ ಆಕಸ್ಮಿಕವಾಗಿ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಗಾಬರಿಗೊಂಡ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ ಗಂಟಲಿನಲ್ಲಿ ಸಿಲುಕಿದ್ದ ನೆಲ್ಲಿಕಾಯಿಯನ್ನು ಹೊರತೆಗೆಯಲಾಗದೆ ಮಗು ಉಸಿರುಗಟ್ಟಿ ಕೊನೆಯುಸಿರೆಳೆದಿದೆ. ಕಣ್ಣೆದುರೇ ಆಡುತ್ತಿದ್ದ ಪುಟ್ಟ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


Spread the love
Share:

administrator

Leave a Reply

Your email address will not be published. Required fields are marked *