Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿವಮೊಗ್ಗ: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಯುವ ಬರಹಗಾರ, ಸಹ ನಿರ್ದೇಶಕ ನಂದೀಶ್ ಜಿ.ಟಿ ವಿಧಿವಶ!

Spread the love

ಶಿವಮೊಗ್ಗ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಲೋಕಕ್ಕೆ ಮತ್ತೊಂದು ಭರಿಸಲಾಗದ ಆಘಾತ ಎದುರಾಗಿದೆ. ಕನ್ನಡದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದ ವೇಳೆಯೇ ನಂದೀಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರಕಥೆ, ಸಂಭಾಷಣೆಯಲ್ಲಿ ಗುರುತಿಸಿಕೊಂಡಿದ್ದ ನಂದೀಶ್ ಅವರು ಕನ್ನಡ ಸಿನಿಮಾ ಹಾಗೂ ಧಾರಾವಾಹಿ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಹಲವಾರು ಕನ್ನಡ ಸಿನಿಮಾಗಳಿಗೆ ಹಾಗೂ ಜನಪ್ರಿಯ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಚುರುಕಾದ ಸಂಭಾಷಣೆಯನ್ನು ಬರೆಯುವ ಮೂಲಕ ಚಿತ್ರರಂಗದಲ್ಲಿ ಭರವಸೆಯ ಬರಹಗಾರನಾಗಿ ಗುರುತಿಸಿಕೊಂಡಿದ್ದರು. ಕೇವಲ ಬರವಣಿಗೆಗೆ ಮಾತ್ರ ಸೀಮಿತವಾಗದೆ, ಇತ್ತೀಚೆಗಷ್ಟೇ ನಿಧನರಾದ ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಜೊತೆಯಲ್ಲಿ ಹಲವು ಪ್ರಾಜೆಕ್ಟ್‌ಗಳಿಗೆ ಸಹ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *