Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ನಕಲಿ ಬಿಕಿನಿ ಫೋಟೋ ವೈರಲ್; ಸೈಬರ್ ಕ್ರೈಂ ಪೊಲೀಸರಿಗೆ ದೂರು!

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ರುಕ್ಮಿಣಿ ವಸಂತ್ ಅವರು ಸಿನಿಮಾ ಚಿತ್ರೀಕರಣವೊಂದಕ್ಕಾಗಿ ಬಿಕಿನಿ ಧರಿಸಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಸಂಪೂರ್ಣ ನಕಲಿ ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಸೃಷ್ಟಿಸಿದ ‘ಡೀಪ್‌ಫೇಕ್’ ಪಿತೂರಿ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಈ ಕೃತ್ಯದ ವಿರುದ್ಧ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಈ ಗಂಭೀರ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಪ್ರಕಟಣೆ ಹಂಚಿಕೊಂಡಿರುವ ರುಕ್ಮಿಣಿ ವಸಂತ್, “ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಹಾಗೂ ಸೃಷ್ಟಿಸಲ್ಪಟ್ಟವುಗಳಾಗಿವೆ. ಇದು ಕೃತಕ ಬುದ್ಧಿಮತ್ತೆ ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನನ್ನ ಮುಖವನ್ನು ಬೇರೊಬ್ಬರ ದೇಹಕ್ಕೆ ಜೋಡಿಸಿ ಸೃಷ್ಟಿಸಿರುವ ಪಿತೂರಿಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಂತಹ ಕೃತ್ಯಗಳು ಒಬ್ಬ ವ್ಯಕ್ತಿಯ ಘನತೆ ಮತ್ತು ಗೌರವಕ್ಕೆ ತೀವ್ರ ಧಕ್ಕೆ ತರುತ್ತವೆ ಎಂದು ಬೇಸರ ವ್ಯಕ್ತಪಡಿಸಿರುವ ನಟಿ, ಸುಳ್ಳು ಫೋಟೋಗಳನ್ನು ಸೃಷ್ಟಿಸಿ ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಅಲ್ಲದೆ, ಅಭಿಮಾನಿಗಳು ಮತ್ತು ಸಾರ್ವಜನಿಕರು ಇಂತಹ ಯಾವುದೇ ನಕಲಿ ವಿಡಿಯೋ ಅಥವಾ ಫೋಟೋಗಳನ್ನು ನಂಬಬಾರದು ಮತ್ತು ಅದನ್ನು ಯಾರಿಗೂ ಶೇರ್ ಮಾಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.

ಆರಂಭದಿಂದಲೂ ಗ್ಲಾಮರ್ ಶೋಗಿಂತ ಅಭಿನಯಕ್ಕೆ ಹೆಚ್ಚು ಆದ್ಯತೆ ನೀಡಿ, ಸಾಂಪ್ರದಾಯಿಕ ಉಡುಗೆಗಳ ಮೂಲಕವೇ ಪ್ರೇಕ್ಷಕರ ಮನಗೆದ್ದಿದ್ದ ರುಕ್ಮಿಣಿ ಅವರ ಈ ಬೋಲ್ಡ್ ಅವತಾರ ಕಂಡು ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಅನುಮಾನ ಮೂಡಿತ್ತು. ಈಗ ನಟಿಯ ಅಧಿಕೃತ ಸ್ಪಷ್ಟನೆಯಿಂದಾಗಿ ಇಂಟರ್ನೆಟ್‌ನಲ್ಲಿದ್ದ ಗೊಂದಲಗಳಿಗೆ ತೆರೆ ಬಿದ್ದಂತಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *