Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುಪಿ: ಆಮಿಷವೊಡ್ಡಿ ಮತಾಂತರ ನಡೆಸುತ್ತಿದ್ದ ಆರೋಪ; ಕ್ರೈಸ್ತ ಧರ್ಮ ಪ್ರಚಾರಕನ ಬಂಧನ

Spread the love

ಲಕ್ಕೊ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮತಾಂತರ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಕ್ರೈಸ್ತ ಧರ್ಮ ಪ್ರಚಾರಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೋಗ್ರಾಜ್ ಪುರ್ ನಲ್ಲಿ ಈ ಮತಾಂತರ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಆರೋಪಿಸಲಾಗಿದೆ.
ಆರೋಪಿಯನ್ನು ಮೊರಾದಾಬಾದ್ ಜಿಲ್ಲೆಯ ನಿವಾಸಿ ಅನೋಖೆ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಸೋಮವಾರ ಬಂಧಿಸಲಾಗಿದೆ.
ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವವರಿಗೆ ಸರಕಾರಿ ಉದ್ಯೋಗ ಮತ್ತು ವಿವಾಹದ ಆಮಿಷವೊಡ್ಡುತ್ತಿದ್ದ ಎಂದು ಅನೋಖೆ ಸಿಂಗ್ ವಿರುದ್ಧ ಆರೋಪ ಕೇಳಿ ಬಂದಿದೆ.
ಸ್ಥಳೀಯ ಆರೆಸ್ಸೆಸ್ ಕಾರ್ಯಕರ್ತ ಗೌರವ್ ಗುಪ್ತ ನೀಡಿದ ಲಿಖಿತ ದೂರನ್ನು ಆಧರಿಸಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳು ಹಾಗೂ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ಉತ್ತರ ಸೆಹ್ರಾಮೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *