ಪುತ್ತೂರು: ಇಸ್ರೇಲ್‌ನಿಂದ ಊರಿಗೆ ಬಂದಿದ್ದ ಯುವಕನಿಗೆ ವಿಧಿ ಆಟ; ಸಂಬಂಧಿಕರ ಮನೆಯಲ್ಲಿ ವಿದ್ಯುತ್ ಶಾಕ್ ತಗುಲಿ ಸಾ*ವು!

ಪುತ್ತೂರು: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ಸಂಬಂಧಿಕರ ಮನೆಯಲ್ಲಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ಬೇಲೂರು ತಾಲೂಕಿನ ಅಂಕಿಹಳ್ಳಿ ನಿವಾಸಿ ಜೊಆಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಎಂದು ಗುರುತಿಸಲಾಗಿದೆ.
ರೋಶನ್ ಪಿಂಟೋ ಅವರು ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ರಜೆಯ ನಿಮಿತ್ತ ಕುಟುಂಬದೊಂದಿಗೆ ಊರಿಗೆ ಬಂದಿದ್ದರು. ಅವರು ತಮ್ಮ ತಂದೆ-ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ಪುತ್ತೂರಿನ ನಿಡಳ್ಳಿ ಗ್ರಾಮದ ಬೊಳುಂಬುಡೆ ಪ್ರದೇಶದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ.ತಕ್ಷಣವೇ ಸಂಬಂಧಿಕರು ಮತ್ತು ಸ್ಥಳೀಯರು ಸೇರಿ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.