Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಷಿಂಗ್ಟನ್: ಇರಾನ್ ಪ್ರಸ್ತಾಪ ನಮಗೆ ತೃಪ್ತಿ ತಂದಿಲ್ಲ, ಒಪ್ಪಂದ ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ; ಡೊನಾಲ್ಡ್ ಟ್ರಂಪ್ ಖಡಕ್ ಹೇಳಿಕೆ!

Spread the love

ವಾಷಿಂಗ್ಟನ್ : ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಇರಾನ್ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಆದರೆ, ಆ ದೇಶದ ಪ್ರಸ್ತಾಪಗಳಿಂದ ಅಮೆರಿಕಕ್ಕೆ ಇನ್ನೂ ತೃಪ್ತಿಯಾಗಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ರಾಜತಾಂತ್ರಿಕ ಮಾತುಕತೆ ಹಾಗೂ ಬಿಕ್ಕಟ್ಟು ಇತ್ಯರ್ಥಕ್ಕೆ ಟೆಹರಾನ್ ಮೇಲೆ ಜಾಗತಿಕವಾಗಿ ಹೆಚ್ಚಿನ ಒತ್ತಡವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶ್ವೇತಭವನದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಟ್ರಂಪ್, ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಸಾಧಿಸಿರುವ ರಾಜತಾಂತ್ರಿಕ ಪ್ರಗತಿಯು ಇನ್ನೂ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. “ಈವರೆಗಿನ ಬೆಳವಣಿಗೆಗಳಿಂದ ನಾವು ತೃಪ್ತರಾಗಿಲ್ಲ. ಆದರೆ ಶೀಘ್ರದಲ್ಲೇ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಇರಾನ್‌ಗೆ ಒಪ್ಪಂದ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ಯಾವುದೇ ಅನ್ಯ ಮಾರ್ಗವಿಲ್ಲ” ಎಂದು ಟ್ರಂಪ್ ಗುಡುಗಿದ್ದಾರೆ.

ಇರಾನ್ ಜೊತೆ ಸುದೀರ್ಘ ಹಾಗೂ ಬಲಿಷ್ಠ ಒಪ್ಪಂದ ಮಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಈ ರಾಜತಾಂತ್ರಿಕ ಪ್ರಕ್ರಿಯೆಯ ಮಧ್ಯೆ ಅಮೆರಿಕದ ಮಧ್ಯಂತರ ಚುನಾವಣೆಗಳು ಎದುರಾದರೂ ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ತಮ್ಮ ಕಠಿಣ ನಿಲುವನ್ನು ಪುನರುಚ್ಚರಿಸಿದ ಅವರು, “ಯಾವ ಕಾರಣಕ್ಕೂ ಇರಾನ್ ಅಣ್ವಸ್ತ್ರಗಳನ್ನು ಹೊಂದಲು ನಾನು ಬಿಡುವುದಿಲ್ಲ. ನಾನಿದನ್ನು ಕೇವಲ ಅಮೆರಿಕಕ್ಕಾಗಿ ಅಲ್ಲ, ಇಡೀ ಜಗತ್ತಿನ ಶಾಂತಿಗಾಗಿ ಮಾಡುತ್ತಿದ್ದೇನೆ” ಎಂದಿದ್ದಾರೆ.

ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹೊರ್ಮುಜ್ ಜಲಸಂಧಿಯ (Strait of Hormuz) ಸುರಕ್ಷತೆಯ ಬಗ್ಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ಟ್ರಂಪ್, “ಹೊರ್ಮುಜ್ ಜಲಸಂಧಿಯು ಎಲ್ಲರಿಗೂ ಮುಕ್ತವಾಗಿರುತ್ತದೆ. ಇದು ಅಂತರರಾಷ್ಟ್ರೀಯ ಸಾಗರ ಪ್ರದೇಶವಾಗಿದ್ದು, ಅಲ್ಲಿ ಯಾರೂ ಸರ್ವಾಧಿಕಾರ ನಡೆಸಲು ಅಥವಾ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಇರಾನ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *