Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಟಪಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಸ್ಕೂಟರ್ ನುಜ್ಜುಗುಜ್ಜು, ಚಾಲಕನಿಗೆ ಗಾಯ!

Spread the love

ಕಟಪಾಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲು ಹಾಗೂ ಇಲೆಕ್ಟ್ರಿಕ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಚಾಲಕ ಗಾಯಗೊಂಡಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಚಲಿಸುತ್ತಿದ್ದ ಕಾರು, ಕಟಪಾಡಿ ಫಾರೆಸ್ಟ್ ಗೇಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿದ್ದ ಕಾರು ಮೊದಲು ರಸ್ತೆ ಬದಿಯಲ್ಲಿದ್ದ ಮೈಲುಗಲ್ಲಿಗೆ (Milestone) ಜೋರಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸ ಎಷ್ಟಿತ್ತೆಂದರೆ ಮೈಲುಗಲ್ಲು ಬುಡಸಮೇತ ಕಿತ್ತು ಬಂದಿದೆ. ಅಷ್ಟಕ್ಕೆ ನಿಲ್ಲದ ಕಾರು, ಅಲ್ಲೇ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಲೆಕ್ಟ್ರಿಕ್ ಸ್ಕೂಟರ್‌ಗೂ ಭೀಕರವಾಗಿ ಢಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ.

ಈ ಭೀಕರ ಅಪಘಾತದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಇಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಇನ್ನು ಅಪಘಾತಕ್ಕೀಡಾದ ಕಾರು ಚಾಲಕ ಗಂಗೊಳ್ಳಿ ನಿವಾಸಿ ಮುಹಮ್ಮದ್ ಝೈನ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *