ಹೊಸದೆಹಲಿ: ವೇದಾಂತ ಗ್ರೂಪ್ ಕಚೇರಿಗಳ ಮೇಲೆ ಇಡಿ ದಾಳಿ; ಫೆಮಾ ಕಾಯ್ದೆಯಡಿ ತನಿಖೆ ಚುರುಕು!

ಹೊಸ ದಿಲ್ಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ಭಾಗವಾಗಿ ವೇದಾಂತ ಗ್ರೂಪ್ಗೆ ಸಂಬಂಧಿಸಿದ ವಿವಿಧ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಫೆಮಾ ಕಾಯ್ದೆಯಡಿ ಕೋಟ್ಯಧಿಪತಿ ಉದ್ಯಮಿ ಅನಿಲ್ ಅಗರ್ವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆಗೆ ಚಾಲನೆ ನೀಡಿದ ಬಳಿಕ ಈ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ಕಂಪನಿಯು ತನಿಖಾ ಸಂಸ್ಥೆಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಅಧಿಕಾರಿಗಳು ಕೇಳಿರುವ ಎಲ್ಲಾ ಮಾಹಿತಿಯನ್ನು ಒದಗಿಸಲಾಗುತ್ತಿದೆ, ವೇದಾಂತ ಸಂಸ್ಥೆ ಪ್ರತಿಕ್ರಿಯಿಸಿದೆ.
