Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೂನ್ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

Spread the love

ನವದೆಹಲಿ: ನೈಋತ್ಯ ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ. ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಟ್ಟವಾದ ಮೋಡಗಳು ಕವಿದಿದ್ದರೂ, ಅರಬ್ಬಿ ಸಮುದ್ರದ ಮೇಲೆ ಬೀಸಬೇಕಾದ ಪಶ್ಚಿಮ ಮಾರುತಗಳ ವೇಗ ಇನ್ನು ಅಗತ್ಯ ಮಟ್ಟವನ್ನು ತಲುಪಿಲ್ಲ. ಹೀಗಾಗಿ ಮುಂಗಾರು ಮೇ 26 ಬದಲಾಗಿ ಜೂನ್ 4 ಕ್ಕೆ ಆರಂಭವಾಗಲಿದ್ದು, ಜೂನ್ 8 ರೊಳಗೆ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಮುಂಗಾರು ಪ್ರವೇಶದ ಪ್ರಭಾವದಿಂದಾಗಿ ಕೇರಳದ ಹಲವು ಜಿಲ್ಲೆಗಳಿಗೆ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಜೂನ್ 7 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೈತರು ಬಿತ್ತನೆ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *