Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೆಲ್ಕಾರ್ ಫ್ಲೈಓವರ್ ಬಳಿ ಕಾರಿನಲ್ಲಿ ಅಕ್ರಮ ಡ್ರಗ್ಸ್ ಸಾಗಾಟ; ಮೂವರು ಆರೋಪಿಗಳು ಖಾಕಿ ವಶಕ್ಕೆ

Spread the love

ಬಂಟ್ವಾಳ : ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಂಟ್ವಾಳ ನಗರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳದ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಮತ್ತು ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳು.

ಜೂನ್ 4 ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ (SI) ಸಂದೀಪ್‌ ಕುಮಾರ್‌ ಶೆಟ್ಟಿಯವರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಂಶಯಾಸ್ಪದವಾಗಿ ಬಂದ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಕಾರಿನಲ್ಲಿ ಚಾಲಕ ಸೇರಿ ಮೂವರು ವ್ಯಕ್ತಿಗಳಿದ್ದು, ಪೊಲೀಸರು ಕಾರನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಮಾದಕ ವಸ್ತು ಸೇವನೆ ಮಾಡಲು ಬಳಸುವ ವಿಶೇಷ ಸಾಧನ ಪತ್ತೆಯಾಗಿದೆ.

ಸಿಕ್ಕಿಬಿದ್ದ ವ್ಯಕ್ತಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ತಾವುಗಳು ಎಂ.ಡಿ.ಎಂ.ಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸರು ಆರೋಪಿಗಳ ಹಾಗೂ ಕಾರಿನಲ್ಲಿ ನಡೆಸಿದ ತಪಾಸಣೆಯ ವೇಳೆ ಅಂದಾಜು ₹7,64,000/- ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ತೂಕದ ಭಾರಿ ಪ್ರಮಾಣದ ಎಂಡಿಎಂಎ ಪತ್ತೆಯಾಗಿದೆ.

ಪೊಲೀಸರು ಮಾದಕ ದ್ರವ್ಯ ಹಾಗೂ ಡ್ರಗ್ಸ್ ಸೇವನೆಗೆ ಬಳಸುತ್ತಿದ್ದ ಸಾಧನವನ್ನು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ ಕಾರು ಮತ್ತು ಆರೋಪಿಗಳ ಬಳಿಯಿದ್ದ 3 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ (NDPS) ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *