“ಕರಾವಳಿ: ಮುಂದಿನ 5 ದಿನ ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ; ಹವಾಮಾನ ಇಲಾಖೆಯಿಂದ ಭಾರಿ ಮಳೆ ಮುನ್ಸೂಚನೆ!”

ಮಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜೂನ್ 7ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಅತೀ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ.
ಜೂನ್ 8ರಂದ 11 ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ (Extremely Very Heavy Rain) ಸಂಭವಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರಿಗೆ ಸೂಚನೆ
ನದಿ, ಹೊಳೆ ಮತ್ತು ತಗ್ಗು ಪ್ರದೇಶಗಳ ಬಳಿ ಎಚ್ಚರಿಕೆಯಿಂದ ಇರಬೇಕು.
ಸಮುದ್ರ ತೀರ ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು.
ಮರಗಳ ಕೆಳಗೆ ಅಥವಾ ದುರ್ಬಲ ಕಟ್ಟಡಗಳ ಬಳಿ ನಿಲ್ಲುವುದನ್ನು ತಪ್ಪಿಸಬೇಕು.
ಅಗತ್ಯವಿಲ್ಲದ ಪ್ರಯಾಣಗಳನ್ನು ಸಾಧ್ಯವಾದಷ್ಟು ಮುಂದೂಡಲು ಸಲಹೆ ನೀಡಲಾಗಿದೆ.
ಹವಾಮಾನ ಇಲಾಖೆಯು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ನವೀಕೃತ ಮುನ್ಸೂಚನೆಗಳನ್ನು ಪ್ರಕಟಿಸಲಿದೆ.