ಸಾರ್ವಜನಿಕ ವೇದಿಕೆಯಲ್ಲಿ ಕಲಾವಿದೆಗೆ ಕಿರುಕು*ಳ: ಯುವಕನಿಗೆ ತಕ್ಕ ಪಾಠ ಕಲಿಸಿದ ಡ್ಯಾನ್ಸರ್!

ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಈ ವೇಳೆ ಅಲ್ಲಿದ್ದ ಕೆಲವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದು, ಘಟನೆಯ ಸಂಪೂರ್ಣ ದೃಶ್ಯವನ್ನು ಯಾರೋ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.ಈ ವಿಡಿಯೋವನ್ನು ‘dimpal__choudhary_77‘ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಕೆಲವೇ ಸಮಯದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅನೇಕರು ಕಲಾವಿದೆಯ ಧೈರ್ಯವನ್ನು ಮೆಚ್ಚಿಕೊಂಡಿದ್ದು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಆದರೆ, ಈ ಘಟನೆ ಎಲ್ಲಿ ನಡೆದಿದೆ ಹಾಗೂ ವಿಡಿಯೋದಲ್ಲಿರುವ ವ್ಯಕ್ತಿಗಳ ಕುರಿತು ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
