Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ; 15 ಮಂದಿ ಸಾ*ವು, ಸುನಾಮಿ ಭೀತಿ!

Spread the love

ಮನಿಲಾ: ದಕ್ಷಿಣ ಫಿಲಿಪೈನ್ಸ್ ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಕನಿಷ್ಠ 15 ಮಂದಿ ಮೃತಪಟ್ಟಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಹಾಗೂ ಪ್ರಮುಖ ಸೇತುವೆಗೆ ಹಾನಿಯಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಸುಮಾರು 1 ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿವೆ.
ಮಿಂಡಾನಾವೊ ದ್ವೀಪದ ಸಾಕ್ಷಾರ್ಗೆನ್ ಪ್ರದೇಶದಲ್ಲಿ 12 ಮಂದಿ ಮೃತಪಟ್ಟಿದ್ದು, 129 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ನಾಗರಿಕ ರಕ್ಷಣಾ ನಿರ್ದೇಶಕ ರೊಡ್ರಿಗೊ ಸೊಸೈನಾ ತಿಳಿಸಿದ್ದಾರೆ. ದಾವೊ ಆಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇನ್ನೂ ಮೂವರು ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಈ ವರ್ಷದ ಅತ್ಯಂತ ಪ್ರಬಲ ಭೂಕಂಪ ಇದಾಗಿದ್ದು, ಜನರಲ್ ಸ್ಯಾಂಟೋಸ್ ನಗರದ ನೈಋತ್ಯ ದಿಕ್ಕಿನ ಸಮುದ್ರ ಪ್ರದೇಶದಲ್ಲಿ ನಗರದಿಂದ ಸುಮಾರು 13 ಕಿ.ಮೀ. ದೂರದಲ್ಲಿ ಇದರ ಕೇಂದ್ರಬಿಂದು ದಾಖಲಾಗಿದೆ. 7 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಜನರಲ್ ಸ್ಯಾಂಟೋಸ್ ನಗರವು ದಕ್ಷಿಣ ಮಿಂಡಾನಾವೊ ಪ್ರದೇಶದ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ.
ಭೂಕಂಪದ ಬಳಿಕ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪಾಯದ ಪ್ರದೇಶಗಳ ನಿವಾಸಿಗಳು ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್ ಮನವಿ ಮಾಡಿದ್ದಾರೆ. ಇಂಡೋನೇಷ್ಯಾ ಮತ್ತು ಮಲೇಷ್ಯಾ ಸರ್ಕಾರಗಳೂ ತಮ್ಮ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಿವೆ.

“ರಾಷ್ಟ್ರೀಯ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ” ಎಂದು ಮಾರ್ಕೋಸ್ ಹೇಳಿದ್ದಾರೆ.
ಭೂಕಂಪದ ನಂತರ ಹಲವು ನಂತರದ ಕಂಪನಗಳು ಸಂಭವಿಸಿವೆ. ಮಲೇಷ್ಯಾದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದ್ದು, ಇಂಡೋನೇಷ್ಯಾ ಮತ್ತು ಮಲೇಷ್ಯಾದ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಅಲೆಗಳು ದಾಖಲಾಗಿವೆ.
ಭೂಕಂಪದ ಪರಿಣಾಮ ಜನರಲ್ ಸ್ಯಾಂಟೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, 17 ದೇಶೀಯ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.

ದಕ್ಷಿಣ ಪ್ರದೇಶದ ನಾಗರಿಕ ರಕ್ಷಣಾ ಕಚೇರಿ ನಿರ್ದೇಶಕ ಎಡ್ಕರ್ ದಯಾಂಗಿರಾಂಗ್ ಅವರ ಪ್ರಕಾರ, ಬೆಳಗಿನ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭೂಕಂಪದ ಭೀತಿಯಿಂದ ಹಲವು ವಿದ್ಯಾರ್ಥಿಗಳು ಮೂರ್ಛ ಹೋಗಿರುವ ಘಟನೆಗಳೂ ವರದಿಯಾಗಿವೆ.
ರಕ್ಷಣಾ ಸಿಬ್ಬಂದಿ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿಸಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *