Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಷಿಂಗ್ಟನ್: ವಿಶ್ವಕ್ಕೆ ನಿರಾಳ ಸುದ್ದಿ; ಅಮೆರಿಕ-ಇರಾನ್ ಭೀಕರ ಯುದ್ಧಕ್ಕೆ ಮುಕ್ತಾಯ ಹಾಡಿದ ಐತಿಹಾಸಿಕ ಶಾಂತಿ ಒಪ್ಪಂದ!

Spread the love

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಅಂತ್ಯಗೊಳಿಸುವ ಶಾಂತಿ ಒಪ್ಪಂದ ಪೂರ್ಣಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಘೋಷಿಸಿದ್ದಾರೆ. ಇದರೊಂದಿಗೆ ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲ ಹಡಗುಗಳ ಸಂಚಾರಕ್ಕೆ ತೆರೆಯಲು ಹಾಗೂ ಇರಾನ್ ವಿರುದ್ಧ ಹೇರಲಾಗಿದ್ದ ಅಮೆರಿಕದ ನೌಕಾ ದಿಗಂಧನವನ್ನು ತಕ್ಷಣದಿಂದಲೇ ಹಿಂತೆಗೆದುಕೊಳ್ಳಲು ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ.
ತಮ್ಮ’ಟ್ರುತ್ ಸೋಶಿಯಲ್ ಖಾತೆಯಲ್ಲಿ ಈ ಕುರಿತು ಪ್ರಕಟಿಸಿರುವ ಟ್ರಂಪ್, ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಜೊತೆಗಿನ ಒಪ್ಪಂದ ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು. ಹಾರ್ಮುಝ್ ಜಲಸಂಧಿಯನ್ನು ಸುಂಕಮುಕ್ತವಾಗಿ ತೆರೆಯಲು ಮತ್ತು ಅಮೆರಿಕದ ನೌಕಾ ದಿಗಂಧನವನ್ನು ತಕ್ಷಣ ತೆಗೆದುಹಾಕಲು ನಾನು ಅಧಿಕಾರ ನೀಡಿದ್ದೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್ ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ’ ಎಂದು ಹೇಳಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನ, ಉಭಯ ರಾಷ್ಟ್ರಗಳ ನಡುವೆ ಶಾಂತಿ ಒಪ್ಪಂದಕ್ಕೆ ತಲುಪಿರುವುದನ್ನು ದೃಢಪಡಿಸಿದ ಕೆಲವೇ ಸಮಯದ ಬಳಿಕ ಟ್ರಂಪ್ ಈ ಘೋಷಣೆ ಮಾಡಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಶಹಬಾಝ್ ಷರೀಫ್ ಅವರು ‘ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ‘ತೀವ್ರ ಮಾತುಕತೆಗಳ ಬಳಿಕ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ತಲುಪಲಾಗಿದೆ. ಲೆಬನಾನ್ ಸೇರಿದಂತೆ ಎಲ್ಲ ರಂಗಗಳಲ್ಲಿ ನಡೆಯುತ್ತಿದ್ದ ಸೇನಾ ಕಾರ್ಯಾಚರಣೆಗಳನ್ನು ತಕ್ಷಣ ಹಾಗೂ ಶಾಶ್ವತವಾಗಿ ಕೊನೆಗೊಳಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ’ ಎಂದು ತಿಳಿಸಿದ್ದಾರೆ.

ಉಭಯ ರಾಷ್ಟ್ರಗಳ ಪ್ರತಿನಿಧಿಗಳು ಶುಕ್ರವಾರ ಸ್ಪಿಟ್ಟರ್‌ಲ್ಯಾಂಡ್ ನಲ್ಲಿ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಒಪ್ಪಂದದ ಸಂಪೂರ್ಣ ವಿವರಗಳನ್ನು ಇದುವರೆಗೆ ಬಹಿರಂಗಪಡಿಸಲಾಗಿಲ್ಲ.
ವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಸುಮಾರು ಐದನೇ ಒಂದು ಭಾಗ ಸಾಗುವ ಹಾರ್ಮುಝ್ ಜಲಸಂಧಿಯು ಜಾಗತಿಕ ಇಂಧನ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಮಾರ್ಗವಾಗಿದೆ. ಫೆಬ್ರುವರಿ 28ರಂದು ಯುದ್ಧ ಆರಂಭವಾದ ಬಳಿಕ ಇರಾನ್ ಈ ಜಲಮಾರ್ಗದ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಎಪ್ರಿಲ್ ನಲ್ಲಿ ಪಾಕಿಸ್ತಾನದಲ್ಲಿ ನಡೆದ ಶಾಂತಿ ಮಾತುಕತೆಗಳು ವಿಫಲವಾದ ನಂತರ ಅಮೆರಿಕ ಇರಾನ್ ಬಂದರುಗಳ ವಿರುದ್ಧ ನೌಕಾ ದಿಗ್ವಂಧನ ಘೋಷಿಸಿತ್ತು.


Spread the love
Share:

administrator

Leave a Reply

Your email address will not be published. Required fields are marked *