Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಡಚಣ: ಚಲಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಕೆಎಸ್‌ಆರ್‌ಟಿಸಿ ಬಸ್‌ಗೆ ಭೀಕರ ಢಿಕ್ಕಿ; ಮೂವರು ಸ್ಥಳದಲ್ಲೇ ಸಾ*ವು!

Spread the love

ಚಡಚಣ : ಟೆಂಪೋ ವಾಹನದ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಝಳಕಿ ಕಡೆಯಿಂದ ಚಡಚಣ ಮಾರ್ಗವಾಗಿ ಚಲಿಸುತ್ತಿದ್ದ ಟೆಂಪೋ ವಾಹನದ ಟೈರ್ ಸ್ಫೋಟ ಆಗಿದೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡ ಟೆಂಪೋ, ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಅಶೋಕ ಮಹಾದೇವ ಉಟಗಿ (ಟೆಂಪೋ ವಾಹನ ಚಾಲಕ, ಹಾವಿನಾಳ ಗ್ರಾಮ, ಚಡಚಣ ತಾಲೂಕು), ರಾಧಾಬಾಯಿ ಅಶೋಕ ಉಟಗಿ (ಅಶೋಕ ಉಟಗಿ ಅವರ ಪತ್ನಿ), ಹಣಮಂತ ಛಲವಾದಿ (ಕೆಎಸ್ಸಾರ್ಟಿಸಿ ಬಸ್ ಚಾಲಕ) ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕರಾದ ಪರುಶುರಾಮ ಮನಗೂಳಿ ಹಾಗೂ ಪಿಎಸ್‌ಐ ಸೋಮೇಶ ಗೆಜ್ಜೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭೀಕರ ಅಪಘಾತದ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *