Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊರಟಗೆರೆಯಲ್ಲಿ ಮಧ್ಯರಾತ್ರಿ ಕರ್ತವ್ಯದಲ್ಲಿದ್ದಾಗಲೇ ತೀವ್ರ ಎದೆನೋವು; ಎಎಸ್‌ಐ ಎನ್.ಜಿ ಪವಾರ್ ದಾರುಣ ಸಾ*ವು!

Spread the love

ತುಮಕೂರು: ಇತ್ತೀಚಿಗೆ ಹೃದಯಾಘಾತ, ಎದೆನೋವಿನ ಕಾರಣದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ತೀವ್ರ ಎದೆ ನೋವು ಕಾಣಿಸಿಕೊಂಡ ಬಳಿಕ ಎಎಸ್‌ಐ ಸಾವನ್ನಪ್ಪಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಮೃತರನ್ನು ASI ಎನ್.ಜಿ ಪವಾರ್ (54) ಎಂದು ಗುರುತಿಸಲಾಗಿದೆ.

ಕೆಎಸ್‌ಆರ್‌ಪಿ ಬೆಟಾಲಿಯನ್‌ನ ಸಿಬ್ಬಂದಿ ಬ್ಯಾರಕ್‌ನಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ವಿಶ್ರಾಂತಿಗೆ ತೆರಳಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲಿ ಅವರು ಕೊನೆ ಉಸಿರೆಳಿದಿದ್ದಾರೆ.

ಎನ್.ಜಿ ಪವಾರ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದವರು. ಬಾಗಲಕೋಟೆಯಲ್ಲಿ ಪತ್ನಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *