Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ನಾಳೆಯಿಂದ ಮೂರು ದಿನ 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ!

Spread the love

ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.

ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರೆಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ 24 ರಿಂದ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *