Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತುಮಕೂರು: ಬಿ.ಸಿ.ಎಂ. ವಸತಿ ನಿಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಆತ್ಮಹ*ತ್ಯೆ!

Spread the love

ತುಮಕೂರು: ನಗರದ ಪ್ರಸಿದ್ಧ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಿಂದುಳಿದ ವರ್ಗಗಳ (BCM) ವಸತಿ ನಿಲಯದಲ್ಲಿ ಸಾವಿಗೆ ಶರಣಾಗಿದ್ದಾನೆ.

ಮೃತರನ್ನು ಮೂಲತಃ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ಜಿ. ಇ ವೆಂಕಟೇಶ್ (25) ಎಂದು ಗುರುತಿಸಲಾಗಿದೆ. ವೆಂಕಟೇಶ್ ತುಮಕೂರು ನಗರದ ಪ್ರಖ್ಯಾತ ಎಸ್‌ಐಟಿ (SIT) ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ನಗರದ ಉಪ್ಪಾರಹಳ್ಳಿಯಲ್ಲಿರುವ ಬಿಸಿಎಂ (BCM) ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಅವರು, ಕೊಠಡಿಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ನೇಣು ಬಿಗಿದುಕೊಂಡಿದ್ದಾನೆ. ಇಂದು (ಸೋಮವಾರ) ಬೆಳಿಗ್ಗೆ ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿ ವೆಂಕಟೇಶ್ ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ತಮ್ಮ ಹೆತ್ತ ಪೋಷಕರು ಹಾಗೂ ಕುಟುಂಬಸ್ಥರನ್ನು ಉದ್ದೇಶಿಸಿ ಭಾವನಾತ್ಮಕ ಡೆತ್ ನೋಟ್ ಒಂದನ್ನು ಬರೆದಿಟ್ಟಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *