Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರಿನಲ್ಲಿ ಪಾರ್ಕಿಂಗ್ ದಂಡದ ಬಿಸಿ: ಕಳೆದ 5 ತಿಂಗಳಲ್ಲಿ ಸಂಗ್ರಹ ₹12.4 ಲಕ್ಷ!

Spread the love

ಮಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ. ನಗರದ ವಿವಿಧೆಡೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸಿರುವುದು ಕಂಡು ಬರುತ್ತಿದೆ. ನಗರದ ಪ್ರಮುಖ ಸ್ಥಳವಾದ ಎಂಜಿ ರಸ್ತೆಯಲ್ಲೂ ಹಲವೆಡೆ ಫುಟ್‌ಪಾತ್ ಪಾರ್ಕಿಂಗ್‌ನಿಂದ ಸಮಸ್ಯೆಯಾಗುತ್ತಿದೆ. ಕದ್ರಿ, ಶಿವಭಾಗ್ ಜಂಕ್ಷನ್, ಸೆಂಟ್ ಆಗ್ನೆಸ್, ಫಲ್ನೀರ್, ಪಾಂಡೇಶ್ವರ, ಬಲ್ಲಾಳ್ ಬಾಗ್‌ನಿಂದ ವೇರ್‌ಹೌಸ್ ರಸ್ತೆ, ಉರ್ವ ಮಾರ್ಕೆಟ್ ರಸ್ತೆ, ಕೆ.ಎಸ್. ರಾವ್ ರಸ್ತೆ, ಬಿಟಿ ರಸ್ತೆ, ರಥಬೀದಿ ಮೊದಲಾದ ಕಡೆಗಳಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಪಾರ್ಕಿಂಗ್ ನಿಯಮಗಳನ್ನು ಉಲ್ಲಂಘಿಸಿ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವುದು ಕಂಡು ಬರುತ್ತಿದೆ.ನಗರದಲ್ಲಿ ಕೆಲವು ಶಾಪಿಂಗ್ ಕಾಂಪ್ಲೆಕ್ಸ್‌ಗಳು ಹಾಗೂ ವಾಣಿಜ್ಯ ಕಟ್ಟಡಗಳಿಗೆ ಬರುವ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಕಾರಣ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳಿಗೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಕಟ್ಟಡಗಳ ಮಾಲೀಕರಿಗೆ ಸಾಕಷ್ಟು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸಂಚಾರ ವಿಭಾಗದ ಡಿಸಿಪಿಯವರಾದ ಕೆ. ರವಿಶಂಕರ್ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *