Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯಲು ಹೋಗಿ ನೀರಿನ ಪಾಲಾದ ಐವರು!”

Spread the love

ಮಳವಳ್ಳಿ : ತಾಲೂಕಿನ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಪಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಮತ್ತು ಕಾರಿನ ಚಾಲಕ ಸೇರಿ ಐವರು ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ,
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (47), ಅವರ ಮಗಳು ಪ್ರಿಯಾಂಕ, ಶ್ವೇತಾ (36), ಯ ಚೈತ್ರಾ (20) ಹಾಗೂ ಕಾರಿನ ಚಾಲಕ ಮಹೇಶ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಕಬ್ಬಾಳು ದೇವಸ್ಥಾನದಲ್ಲಿ ಬೀಗರ ಔತಣಕೂಟದ ನಿಮಿತ್ತ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ತಾಣಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ನಂತರ ಕಾವೇರಿ ನದಿಯಲ್ಲಿ ಸೆಲ್ಪಿ ತೆಗೆಯುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಹಿಳೆಯರು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದಾಗ ರಕ್ಷಿಸಲು ಮುಂದಾದ ಚಾಲಕ ಮಹೇಶ್ ಕೂಡ ನೀರು ಪಾಲಾಗಿದ್ದಾರೆ.
ನೀರಿನಲ್ಲಿ ಮುಳುಗಿದ್ದ ಮೃತದೇಹಗಳನ್ನು ನುರಿತ ಈಜುಗಾರರ ಸಹಾಯದಿಂದ ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಳಿಕ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುತ್ತದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾ.ವಿ.ಜೆ.ಶೋಭರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಹಲಗೂರು ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *