Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಲಬುರಗಿ: ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹ*ತ್ಯೆ; ಮನಕಲಕುವ ಘಟನೆ!

Spread the love

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಗುರುವಾರ ಮನಕಲಕುವ ಘಟನೆ ನಡೆದಿದ್ದು, ಒಂದೂವರೆ ವರ್ಷದ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೆ ಶರಣಾದ ಮಹಿಳೆಯನ್ನು ಅಂಬಿಕಾ(25) ಹಾಗೂ ಆಕೆಯ ಒಂದೂವರೆ ವರ್ಷದ ಪುತ್ರ ಆರಾಧ್ಯ ಎಂದು ಗುರುತಿಸಲಾಗಿದೆ.

ಮೂರು ವರ್ಷಗಳ ಹಿಂದೆ ವೀರಭದ್ರಪ್ಪ ಎಂಬಾತನನ್ನು ಮದುವೆಯಾಗಿದ್ದ ಅಂಬಿಕಾ ಒಂದೂವರೆ ವರ್ಷದ ಮಗನಿದ್ದನು. ಅಲ್ಲದೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ.

ಅಂಬಿಕಾ ಮಂಗಳವಾರ ಬೆಳಗ್ಗೆಯೇ ಮನೆಯಿಂದ ಮನೆಯಿಂದ ಹೊರಟು ಹೋಗಿದ್ದಳು. ಮಹಿಳೆ ಕಾಣದಿದ್ದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಗ್ರಾಮದ ಹೊರ ಭಾಗದಲ್ಲಿದ್ದ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಈ ವೇಳೆ ಬಾವಿಯೊಳಗೆ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *