Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಮನಗರ: ಫಾರ್ಮ್ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲರಿಗೆ ಗಂಭೀರ ಗಾಯ.

Spread the love

ರಾಮನಗರ: ಬೆಂಗಳೂರು ದಕ್ಷಿಣ ‌ಜಿಲ್ಲೆ ಹಾರೋಹಳ್ಳಿ ತಾಲೂಕಿನ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಫಾರ್ಮ್ ಹೌಸ್ ಮುಂಭಾಗದ ಗೇಟ್ ಬಳಿ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು ಎನ್ನಲಾಗುತ್ತಿದೆ. ಸುಣ್ಣ ಘಟ್ಟ ಗ್ರಾಮದಲ್ಲಿರೋ ಫಾರ್ಮ್ ಹೌಸ್​​ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ.

ಬೆಂಗಳೂರು ದಕ್ಷಿಣ ‌ಜಿಲ್ಲೆ ಹಾರೋಹಳ್ಳಿ ತಾಲೂಕಿನ ಸುಣ್ಣಘಟ್ಟ ಗ್ರಾಮದ ಜಮೀನಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ವಕೀಲ ಎನ್​ಸಿ ಮೋಹನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಣ್ಣಘಟ್ಟ ಗ್ರಾಮದ ಜಮೀನಿನಲ್ಲಿ ಮೋಹನ್​ ಫಾರ್ಮ್​​ಹೌಸ್ ಕಟ್ಟಿಕೊಂಡಿದ್ರು,

ಇಂದು ಬೆಳಗ್ಗೆ ಕೂಡ ತೋಟಕ್ಕೆ ಬಂದಿದ್ದು, ಮನೆಯ ಮುಂಭಾಗದ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ. ಗಾಯಾಳು ಮೋಹನ್ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *