Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮೆರಿಕ-ಇರಾನ್ ಉದ್ವಿಗ್ನತೆ: ಹಾರ್ಮುಝ್ ಜಲಸಂಧಿಯಲ್ಲಿ ಡೋನ್ ದಾಳಿ; ಕದನ ವಿರಾಮ ಉಲ್ಲಂಘನೆ ಎಂದ ಟ್ರಂಪ್!

Spread the love

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ದುರ್ಬಲ ಕದನ ವಿರಾಮ ಒಪ್ಪಂದವು ಮತ್ತೊಮ್ಮೆ ಒತ್ತಡಕ್ಕೆ ಸಿಲುಕಿದ್ದು, ಹಾರ್ಮುಝ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ನಾಲ್ಕು ಆತ್ಮಾಹುತಿ ಮಾದರಿಯ ಡೋನ್‌ಗಳನ್ನು ಉಡಾಯಿಸಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಆರೋಪಿಸಿದ್ದಾರೆ. ಈ ಪೈಕಿ ಒಂದು ಡೋನ್ ಸರಕು ಹಡಗಿಗೆ ಅಪ್ಪಳಿಸಿದ್ದು, ಉಳಿದ ಮೂರು ಡೋನ್‌ಗಳನ್ನು ಅಮೆರಿಕದ ಪಡೆಗಳು ಹೊಡೆದುರುಳಿಸಿವೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಟೂತ್ ಸೋಶಿಯಲ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಹಾರ್ಮುಝ್ ಜಲಸಂಧಿಯ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ನಾಲ್ಕು ‘ಒನ್-ವೇ ಅಟ್ಯಾಕ್ ಡೋನ್‌’ಗಳನ್ನು ಉಡಾಯಿಸಿತ್ತು ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ನ ಈ ಕ್ರಮವನ್ನು ಅವರು ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಒಪ್ಪಂದದ ‘ಮೂರ್ಖತನದ ಉಲ್ಲಂಘನೆ’ ಎಂದು ಅವರು ಹೇಳಿದ್ದಾರೆ.

“ಒಂದು ಡೋನ್ ಸರಕು ಸಾಗಣೆ ಹಡಗಿಗೆ ಅಪ್ಪಳಿಸಿದ್ದು, ಉಳಿದ ಮೂರು ಡೋನ್‌ಗಳನ್ನು ಅಮೆರಿಕದ ಪಡೆಗಳು ಯಶಸ್ವಿಯಾಗಿ ತಡೆದು ಹೊಡೆದುರುಳಿಸಿವೆ. ಇದು ಕದನ ವಿರಾಮದ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಟ್ರಂಪ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಹಾರ್ಮುಝ್ ಜಲಸಂಧಿಯು ಜಾಗತಿಕ ತೈಲ ಮತ್ತು ಅನಿಲ ಸಾಗಣೆಯ ಪ್ರಮುಖ ಸಮುದ್ರ ಮಾರ್ಗವಾಗಿದ್ದು, ಅಲ್ಲಿನ ಯಾವುದೇ ಭದ್ರತಾ ಸವಾಲು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಇತ್ತೀಚಿನ ವಾರಗಳಲ್ಲಿ ಪ್ರದೇಶದಲ್ಲಿ ಉದ್ವಿಗ್ನತೆ ಕಡಿಮೆ ಮಾಡಲು ರಾಜತಾಂತ್ರಿಕ ಮಟ್ಟದಲ್ಲಿ ಹಲವು ಪ್ರಯತ್ನಗಳು ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *