Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಶನಿವಾರದ ಶಾಲಾ ವೇಳಾಪಟ್ಟಿಯಲ್ಲಿ ಭಾರಿ ಬದಲಾವಣೆ!

Spread the love

ಬೆಂಗಳೂರು : ಶಿಕ್ಷಣ ಇಲಾಖೆಯು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಇಲ್ಲಿಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಸಮಯ ಇತ್ತು. ಕೆಲವು ಶಾಲೆಗಳಲ್ಲಿ ಬೆಳಗ್ಗೆ 8ರಿಂದ 12 ಗಂಟೆಯವರೆಗೆ ತರಗತಿಗಳಿದ್ದರೆ, ಇನ್ನೂ ಕೆಲವು ಕಡೆ 7.30ರಿಂದ 11.30ರವರೆಗೆ ಶಾಲೆ ನಡೆಯುತ್ತಿತ್ತು.
ಈ ಗೊಂದಲಕ್ಕೆ ತೆರೆ ಎಳೆದಿರುವ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಒಂದೇ ಸಮಯವನ್ನು ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸರಕಾರ ಈಗಾಗಲೇ ಆನ್‌ಲೈನ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಶಿಕ್ಷಕರು ಯಾವುದೇ ತಾಂತ್ರಿಕ ಒತ್ತಡವಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ಹಾಜರಾತಿಯನ್ನು ದಾಖಲಿಸಲು ಈ ಹೊಸ ವೇಳಾಪಟ್ಟಿ ಮತ್ತು ಹೆಚ್ಚುವರಿ ಸಮಯವು ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *