ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: 183.50 ರೂ. ಕಡಿತ!

ಹೊಸದಿಲ್ಲಿ: ತೈಲ ಮಾರುಕಟ್ಟೆ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 183.50 ರೂ.ಗಳಷ್ಟು ಕಡಿತಗೊಳಿಸಿದೆ. 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪರಿಷ್ಕೃತ ದರ ಬುಧವಾರದಿಂದಲೇ ಜಾರಿಗೆ ಬಂದಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಿಂದ ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಸಹಕಾರಿಯಾಗಲಿದೆ.
ಮಧ್ಯಪ್ರಾಚ್ಯ ಸಂಘರ್ಷದ ನಂತರ ಇಂಧನ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ದಿಲ್ಲಿಯಲ್ಲಿ 3,113ರೂ. ಇತ್ತು. ಬೆಲೆ ಇಳಿಕೆಯಿಂದಾಗಿ ಅದು 2,930ರೂ.ಗೆ ಇಳಿಕೆಯಾಗಿದೆ.
