ಶಿವಮೊಗ್ಗ: ಅಜ್ಜಿಯನ್ನೇ ಕೊಂದ ಮೊಮ್ಮಗನಿಗೆ ಗುಂಡೇಟು; ಆರೋಪಿಯ ಕಾಲಿಗೆ ಗುಂಡು ಹೊಡೆದ ಪೊಲೀಸರು!

ಶಿವಮೊಗ್ಗ, : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಅಜ್ಜಿಯನ್ನೇ ಹತ್ಯೆ ಮಾಡಿದ್ದ ಮೊಮ್ಮಗನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡೇಟು ನೀಡಿದ್ದಾರೆ.

ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್ನಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.
ಗಾಯಾಳು ಕಿಶೋರ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿನ್ನೆ ಸಂಜೆ ಗಾಂಜಾ ಗಲಾಟೆ ಭಾಗವಾಗಿ ಅಜ್ಜಿಯನ್ನ ಆರೋಪಿ ಕಿಶೋರ್ ಕೊಲೆ ಮಾಡಿದ್ದ. ಸುಶೀಲಮ್ಮ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಸಾಯಿಸಿದ್ದ. ಈತನ ಮೇಲೆ ಗಾಂಜಾ ಪೆಡ್ಲರ್ ಹಾಗೂ ಗಾಂಜಾ ಸೇವನೆ ಕೇಸ್ ಇತ್ತು.