ಶಿಕ್ಷಕರು ಮಕ್ಕಳಿಗೆ ಹೊಡೆಯುವುದನ್ನು ಸಹಿಸುವುದಿಲ್ಲ: ಹೈಕೋರ್ಟ್ ಕಟು ಎಚ್ಚರಿಕೆ!

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್,ಯುಕೆಜಿ ವಿದ್ಯಾರ್ಥಿನಿಗೆ ಕೋಲಿ ನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರ ಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಮಗುವಿಗೆ ಹೊಡೆದ ಪ್ರಕರಣ ಸಂಬಂಧ ಮಂಗಳೂರಿನಲ್ಲಿರುವ 2ನೇ ಜೆಎಂಎಫ್‌ಸಿ ಕೋರ್ಟ್ ವಿಚಾರಣಾ ಪ್ರಕ್ರಿಯೆ ರದ್ದು ಪಡಿಸಬೇಕು ಎಂದು ಕೋರಿ ಸುರತ್ಕಲ್ ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ಅರ್ಜಿ ದಾರ ಪರ ವಕೀಲರನ್ನುದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಉದ್ದೇಶಿಸಿ ಶಿಕ್ಷಕಿ ಯಾಕೆ ಮಗುವನ್ನು ಹೊಡೆದರು ಎಂದು ಪ್ರಶ್ನಿಸಿತು. ಅರ್ಜಿದಾರ ಪರ ವಕೀಲರು, ನಾವಲ್ಲ ಎಂದು ಹೇಳುತ್ತಿದ್ದಂತೆಯೇ ಕೋಪಗೊಂಡ ನ್ಯಾಯಪೀಠ, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ. ಇಂಥ ನಡೆ ನ್ಯಾಯಾಲಯ ಸಹಿಸಲ್ಲ ಎಂದು ಕಟುವಾಗಿ ನುಡಿಯಿತು.