Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಟ್ಲ: ಲಾರಿಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ; 10 ಬ್ಯಾಟರಿಗಳು ವಶ!

Spread the love

ವಿಟ್ಲ : ಕಳೆದ ಕೆಲವು ಸಮಯದಿಂದ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ವಿಟ್ಲ ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಲಾಗಿದ್ದ 10 ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಚರ್ಕಳ ನಿವಾಸಿ ಅಬ್ದುಲ್ ಶಮೀರ್ P. A. (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಬಂಧಿತ ಆರೋಪಿಗಳು. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯದಲ್ಲಿ ರಸ್ತೆ ಬದಿ ಹಾಗೂ ವಿವಿಧೆಡೆ ನಿಲ್ಲಿಸಲಾಗುತ್ತಿದ್ದ ಲಾರಿಗಳ ಬ್ಯಾಟರಿಗಳನ್ನೇ ಗುರಿಯಾಗಿಸಿಕೊಂಡು ಈ ಖದೀಮರು ಕಳ್ಳತನ ನಡೆಸುತ್ತಿದ್ದರು. ಈ ಸರಣಿ ಕಳ್ಳತನಗಳಿಗೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಅಪರಾಧ ಸಂಖ್ಯೆ: 38/2025, 39/2026, 41/2026, 123/2026 ಹಾಗೂ 126/2026 ರಂತೆ ಒಟ್ಟು 05 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ದಾಖಲಾಗಿದ್ದ ಪ್ರಕರಣಗಳ ಜಾಡು ಹಿಡಿದು ತೀವ್ರ ತನಿಖೆ ಕೈಗೊಂಡ ವಿಟ್ಲ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಆರೋಪಿಗಳಾದ ಅಬ್ದುಲ್ ಶಮೀರ್ ಮತ್ತು ಅಬ್ದುಲ್ ಮಜಿದ್‌ನನ್ನು ದಸ್ತಗಿರಿ ಮಾಡಿದ್ದಾರೆ. ತೀವ್ರ ವಿಚಾರಣೆಯ ಬಳಿಕ ಆರೋಪಿಗಳು ಬಚ್ಚಿಟ್ಟಿದ್ದ 10 ಬ್ಯಾಟರಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಂಧನದಿಂದ ಲಾರಿ ಮಾಲೀಕರು ಹಾಗೂ ಚಾಲಕರು ನಿಟ್ಟುಸಿರು ಬಿಡುವಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *