Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶೃಂಗೇರಿ: ಕೋಟಿಗಟ್ಟಲೆ ವೆಚ್ಚದ ತಡೆಗೋಡೆ ಬಿರುಕು; ಮಳೆಗಾಲದಲ್ಲಿ ಕುಸಿತದ ಭೀತಿ, ಜನರ ಆತಂಕ!

Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ.

ಬೃಹತ್ ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಅದರ ಕೆಳಭಾಗದಲ್ಲಿರುವ ಮನೆಗಳನ್ನು ಮತ್ತು 18ಕ್ಕೂ ಹೆಚ್ಚು ಅಂಗಡಿಗಳನ್ನು ಖಾಲಿ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಸುಮಾರು 50 ಅಡಿ ಎತ್ತರ ಹಾಗೂ 120 ಅಡಿ ಅಗಲವಿರುವ ಈ ಬೃಹತ್ ತಡೆಗೋಡೆಯಲ್ಲಿನ ಬಿರುಕು ಕಾಣಿಸಿಕೊಂಡಿದ್ದು, ಪ್ರಸ್ತುತ ಮಳೆಗಾಲವಾಗಿರುವುದರಿಂದ ಮಳೆ ಮತ್ತಷ್ಟು ಹೆಚ್ಚಾದರೆ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬೀಳುವ ಅಪಾಯವಿದೆ.

ಒಂದು ವೇಳೆ ತಡೆಗೋಡೆ ಕುಸಿದರೆ ಕೆಳಗಿರುವ ಮನೆ ಹಾಗೂ ಅಂಗಡಿಗಳು ನೇರವಾಗಿ ಭದ್ರಾ ನದಿ ಪಾಲಾಗುವ ಆತಂಕ ಇದೆ. ಇದು ಶೃಂಗೇರಿ ಶಾರದಾ ಮಠಕ್ಕೆ ತೆರಳುವ ಪ್ರಮುಖ ಮಾರ್ಗದಲ್ಲೇ ಇರುವುದರಿಂದ ನಿರಂತರ ಸಾರ್ವಜನಿಕ ಸಂಚಾರವೂ ಇದೆ.

2024ರ ಮಳೆಗಾಲದಲ್ಲಿ ಕುಸಿತ ಸಂಭಿಸಿದ್ದ ಇದೇ ಜಾಗದಲ್ಲಿ, ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಈ ಹೊಸ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ, ಕಾಮಗಾರಿ ಪೂರ್ಣಗೊಂಡು ಕೇವಲ ಕೆಲವೇ ತಿಂಗಳು ಕಳೆಯುವುದರೊಳಗಾಗಿ ತಡೆಗೋಡೆಯಲ್ಲಿ ಬಿರುಕು ಬಿಟ್ಟಿದೆ. ಗೋಡೆಯ ಒಳಗೆ ಕೇವಲ ಮಣ್ಣು ತುಂಬಿ ಕಳಪೆ ಕಾಮಗಾರಿ ನಡೆಸಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಜಿಲ್ಲಾಡಳಿತ ಮಾತ್ರ ಇದುವರೆಗೆ ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್​ ಅನುಪ್ ಅವರು, ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೆಳಭಾಗದಲ್ಲಿರುವ ಅಂಗಡಿಗಳು ಮತ್ತು ಮನೆಗಳನ್ನ ಖಾಲಿ ಮಾಡಲು ಸೂಚನೆ ನೀಡಿದ್ದೇವೆ. ತಾಲೂಕು ಆಡಳಿತದಿಂದ ಕಾಳಜಿ ಕೇಂದ್ರ ತರೆಯುತ್ತೇವೆ. ಆ ಮೂಲಕ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇವೆ. ಇನ್ನು ತಜ್ಞರ ತಂಡ ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದು, ಅವರ ಅಭಿಪ್ರಾಯ ಪಡೆದು ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *