Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಂದಾಪುರ: ಹೆದ್ದಾರಿಯಲ್ಲಿ ಲಾರಿ-ಬೈಕ್ ಭೀಕರ ಅಪಘಾತ; ಸ್ಥಳದಲ್ಲೇ ಯುವಕ ಸಾ*ವು!

Spread the love

ಕುಂದಾಪುರ : ಕೊಟೇಶ್ವರದ ಕಿನಾರ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಡೂರು ಕುಂಜಾಡಿ ಗ್ರಾಮದ ಜನ್ನಾಲು ಕೊಳ್ತಾ ನಿವಾಸಿ ಆನಂದ ಶೆಟ್ಟಿ ಅವರ ಪುತ್ರ ಭರತ್ ಶೆಟ್ಟಿ (33) ಮೃತಪಟ್ಟ ದುರ್ದೈವಿ. ಇವರು ಕೋಟೇಶ್ವರ ಸಮೀಪದ ಖಾಸಗಿ ಪೈಂಟಿಂಗ್ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಭರತ್ ಶೆಟ್ಟಿ ಅವರು ಎಂದಿನಂತೆ ತಮ್ಮ ಅಂಗಡಿಯ ಕೆಲಸದ ನಿಮಿತ್ತ ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಿನಾರ ಜಂಕ್ಷನ್ ತಲುಪುತ್ತಿದ್ದಂತೆ, ಹಿಂದಿನಿಂದ ಅತಿವೇಗವಾಗಿ ಬಂದ ಲಾರಿಯೊಂದು ಇವರ ಬೈಕಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಭೀಕರತೆಗೆ ಭರತ್ ಶೆಟ್ಟಿ ಅವರು ರಾಷ್ಟ್ರೀಯ ಹೆದ್ದಾರಿಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಹಾಗೂ ಸಾರ್ವಜನಿಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಅದಾಗಲೇ ಅವರು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಮೃತ ಭರತ್ ಶೆಟ್ಟಿ ಅವರಿಗೆ ಕೇವಲ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು, ನವವಿವಾಹಿತ ಪತ್ನಿ ಹಾಗೂ ಹೆತ್ತವರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *