ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಹಾನಿ – 4 ಪೊಲೀಸರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ DSP ಧೀರಜ್ ಕಟೋಚ್, 1 PARA ಯೋಧ ಸೇರಿ ಐವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರರಿಂದ ನಾಲ್ಕು ಭಯೋತ್ಪಾದಕರು ಇನ್ನೂ ಅವಿತುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಶೋಧಕಾರ್ಯ ಮುಂದುವರಿದಿದೆ. ಕಥುವಾ ಜಿಲ್ಲೆಯ ಸುಫೈನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನಲ್ಲಿ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಮೃತಪಟ್ಟ ಪೊಲೀಸರಲ್ಲಿ ಹೆಡ್ ಕಾನ್ಸ್‌ಟೇಬಲ್ ಮತ್ತು ಇಬ್ಬರು ಕಾನ್ಸ್‌ಟೇಬಲ್ ಇದ್ದಾರೆ. ಗುಂಡಿನ ದಾಳಿ ತೀವ್ರವಾಗಿದ್ದರಿಂದ ಮೃತದೇಹಗಳನ್ನು ಸ್ಥಳದಿಂದ ಸಾಗಿಸಲು ಸಾಧ್ಯವಾಗಿಲ್ಲ. ಗ್ರೆನೇಡ್ ಮತ್ತು ರಾಕೆಟ್ ದಾಳಿಯಿಂದ ಪ್ರದೇಶವು ತತ್ತರಿಸಿದೆ

