Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ: ಫರಂಗೀಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ; ಮೇಲ್ಛಾವಣಿ ತುಂಡರಿಸಿ ನುಗ್ಗಿದ ಕಿಡಿಗೇಡಿಗಳು!

Spread the love

ಬಂಟ್ವಾಳ: ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್  ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ.

ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ. ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡಗಳು ಭೇಟಿ ನೀಡಿವೆ. ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಹೆಚ್ಚಿನ ಪರಿಶೀಲನೆಯ ಬಳಿಕ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


Spread the love
Share:

administrator

Leave a Reply

Your email address will not be published. Required fields are marked *