ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದ ಖಡಕ್ ಎಚ್ಚರಿಕೆ: ಎಸ್ಒಪಿ ಪಾಲನೆ ಕಡ್ಡಾಯ ಎಂದ ಸರ್ಕಾರ!

ಹೊಸ ದಿಲ್ಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ (ಸಿಎಸ್ಎಎಂ ) ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್ಸಾರ್ಮ್ಗಳು ನಿಗದಿತ ಪ್ರಮಾಣಿತ ಕಾರ್ಯವಿಧಾನ(ಎಸ್ಒಪಿ) ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇನ್ನಾಗ್ರಾಮ್ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ ಪ್ರವೇಶವನ್ನು ಉತ್ತೇಜಿಸುವ ಅಥವಾ ಸುಲಭಗೊಳಿಸುವ ಜಾಹೀರಾತುಗಳ ಕುರಿತಾದ ನೋಟಿಸ್ಥೆ ಮೆಟಾ ನೀಡಿರುವ ಪ್ರತಿಕ್ರಿಯೆಯನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪರಿಶೀಲಿಸುತ್ತಿರುವ ಬೆನ್ನಲ್ಲೇ ಸರ್ಕಾರದ ಈ ಹೇಳಿಕೆ ಹೊರಬಿದ್ದಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳನ್ನು ಸಮಯಕ್ಕೆ ಸರಿಯಾಗಿ ವರದಿ ಮಾಡುವುದು, ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ ನಂತಹ ನಿಯೋಜಿತ ಸಂಸ್ಥೆಗಳ ಮೂಲಕ ಕೆಲಸ ಮಾಡುವುದು ಸೇರಿದಂತೆ ಎಲ್ಲಾ ಅಗತ್ಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ತಿಳಿಸಿದೆ.
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ಲಾಟ್ಸಾರ್ಮ್ಗಳಿಗೆ ಈ ಕಾರ್ಯವಿಧಾನಗಳ ಪಾಲನೆ ಪ್ರಮುಖ ಜವಾಬ್ದಾರಿಯಾಗಿದೆ. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಅನ್ವಯವಾಗುವ ಕಾನೂನು ಚೌಕಟ್ಟಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಇನ್ನಾಗ್ರಾಮ್ನಲ್ಲಿ ಇಂತಹ ಜಾಹೀರಾತುಗಳು ಕಾಣಿಸಿಕೊಂಡಿರುವ ವರದಿಗಳ ನಂತರ, ಮೆಟಾದ ಜಾಹೀರಾತು ಪರಿಶೀಲನಾ ವ್ಯವಸ್ಥೆಗಳು, ಕಂಟೆಂಟ್ ಮಾಡರೇಶನ್ ಪ್ರಕ್ರಿಯೆಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ವಿವರಣೆ ಕೋರಿ ಕೇಂದ್ರ ಸರ್ಕಾರವು ನೋಟಿಸ್ ಜಾರಿ ಮಾಡಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣ000 ಮೆಟಾ ಸಂಸ್ಥೆಯಿಂದ ಪ್ರತಿಕ್ರಿಯೆ ಬಂದಿದ್ದು, ಅದನ್ನು ಮೌಲ್ಯಮಾಪನ ಮಾಡಿದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಇಂತಹ ವಿಷಯಗಳನ್ನು ಪತ್ತೆಹಚ್ಚುವಲ್ಲಿ, ವರದಿ ಮಾಡುವಲ್ಲಿ ಮತ್ತು ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಮೆಟಾ ತನ್ನ ಜವಾಬ್ದಾರಿಗಳನ್ನು ಸರಿಯಾಗಿ ಪಾಲಿಸಿದೆಯೇ ಎಂಬುವುದರ ಮೇಲೆಯೇ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ತಿಳಿಸಿದ್ದಾರೆ.