Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಿಧನ!

Spread the love

ಕಾರ್ಕಳ : ಶಿವತಿಕೆರೆ ಸಮೀಪ ರವಿವಾರ (ಜುಲೈ 12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್‌ ರಾವ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಓರ್ವ ಪ್ರಾಮಾಣಿಕ ಅಧಿಕಾರಿಯ ಅಕಾಲಿಕ ಮರಣವು ಇಡೀ ತಾಲೂಕು ಕಚೇರಿ ಹಾಗೂ ಸ್ಥಳೀಯರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ರವಿವಾರ ಸಂಜೆ ಶಿವಪ್ರಸಾದ್ ರಾವ್ ಅವರು ಕಾರ್ಕಳದಿಂದ ತಮ್ಮ ಸ್ಕೂಟರಿನಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಸ್ಕೂಟರ್‌ನ ಇಂಡಿಕೇಟರ್ ನೀಡಿ ಯೂ-ಟರ್ನ್ (U-Turn) ಪಡೆಯಲು ಮುಂದಾಗಿದ್ದರು. ಇದೇ ವೇಳೆ ಹಿಂದಿನಿಂದ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಒಂದು ಅವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಶಿವಪ್ರಸಾದ್ ರಾವ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಗಾಯಗಳ ತೀವ್ರತೆ ಹೆಚ್ಚಿದ್ದ ಕಾರಣ, ವೈದ್ಯರ ಸತತ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಕಂದಾಯ ಇಲಾಖೆಯಲ್ಲಿ ಅತ್ಯಂತ ಕರ್ತವ್ಯನಿಷ್ಠ ಹಾಗೂ ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದ್‌ ರಾವ್ ಅವರ ನಿಧನಕ್ಕೆ ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *