Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಜೇಶ್ವರ: ವ್ಯಾಯಾಮ ಶಾಲೆಗೆ ನುಗ್ಗಿ ಕಾಣಿಕೆ ಡಬ್ಬಿ ದೋಚಿದ ಕಳ್ಳರು!

Spread the love

ಮಂಜೇಶ್ವರ : ಉದ್ಯಾವರ ಮಾಡ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಗೆ ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಹಣ ಕಳವು ಮಾಡಿ ಪರಾರಿಯಾಗಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಶನಿವಾರ ಸಂಜೆ ನಡೆಯಲಿದ್ದ ವಿಶೇಷ ಪೂಜೆಯ ಸಿದ್ಧತೆಗಾಗಿ ವ್ಯಾಯಾಮ ಶಾಲೆಯ ಪದಾಧಿಕಾರಿಯೊಬ್ಬರು ಬೆಳಿಗ್ಗೆ 5 ಗಂಟೆ ಸುಮಾರಿಗೆ ಆಗಮಿಸಿದ ವೇಳೆ ಕಳವು ನಡೆದಿರುವುದು ಪತ್ತೆಯಾಗಿದೆ.
ಆರೋಪಿಗಳು ಕಬ್ಬಿಣದ ರಾಡ್‌ನಿಂದ ಮುಖ್ಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ನಗದು ಹಣವನ್ನು ದೋಚಿದ್ದಾರೆ. ಬಳಿಕ ಖಾಲಿ ಕಾಣಿಕೆ ಡಬ್ಬಿಯನ್ನು ವ್ಯಾಯಾಮ ಶಾಲೆಯ ಮುಂಭಾಗದ ಪೊದೆಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಸದಾನಂದ ರವರು ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *